ಬಾಳೆದಿಂಡಿನಿಂದ ನಾರು ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ(chitradurga)
ಧಾರವಾಡ ಕೃಷಿ ವಿಶ್ವವಿದ್ಯಾಲಯ, ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ-ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್‍ಮೆಂಟ್ ಇವರ ಸಂಯುಕ್ತಾಶ್ರಯದಲ್ಲಿ “ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಕೌಶಲ್ಯ ಅಭಿವೃದ್ಧಿ ತರಬೇತಿ” ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ

ದನ್ನೂ ಓದಿ: ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ತರಬೇತಿ ಕಾರ್ಯಕ್ರಮವನ್ನು ಜಿಲ್ಲೆಯ ರೈತರು, ಬಾಳೆ ಬೆಳೆಗಾರರು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಉಳ್ಳವರು ಮತ್ತು ಕುಶಲಕರ್ಮಿಗಳಿಗಾಗಿ ಆಯೋಜಿಸಲಾಗಿದೆ. ಇದು ಐದು ದಿನಗಳ ತರಬೇತಿ ಕಾರ್ಯಾಗಾರವಾಗಿದ್ದು, ಇದೇ ಜನವರಿ 8 ರಿಂದ 12 ರವರೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಇದೇ ಜನವರಿ 6ರೊಳಗೆ ಗಣೇಶ್ ತೋಳಾರ್ ಅವರ ದೂರವಾಣಿ ಸಂಖ್ಯೆ 7349695100 ಹಾಗೂ ಕೋಟೇಶ್ ಕೊರವರ ಅವರ ದೂರವಾಣಿ ಸಂಖ್ಯೆ 9663364234 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬಹುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ನೋಂದಾಯಿಸಿದ ನಂತರ ಸಂಸ್ಥೆಯು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಭ್ಯರ್ಥಿಗಳಿಗೆ ತಿಳಿಸಲಾಗುವುದು. ಆಯ್ಕೆ ಆದ ಅಭ್ಯರ್ಥಿಗಳು ಕಡ್ಡಾಯವಾಗಿ ಐದು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಬೇಕು. ಈ ತರಬೇತಿ ಕಾರ್ಯಾಗಾರದಲ್ಲಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ.
ಈ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನ ತಂತ್ರಜ್ಞಾನ ಮತ್ತು ನಾವಿನ್ಯತಾ ಕೇಂದ್ರದ ಕಾರ್ಯಕ್ರಮ ವ್ಯವಸ್ಥಾಪಕ ಪ್ರತಾಪ್ ಮೂರ್ತಿ ಕೋರಿದ್ದಾರೆ.

[t4b-ticker]

You May Also Like

More From Author

+ There are no comments

Add yours