ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ ಫೆ. 24 (ಕರ್ನಾಟಕ ವಾರ್ತೆ) :
ಕೃಷಿ ಇಲಾಖೆಯಿಂದ ರೈತ ಕುಟುಂಬದ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ನೀಡಲಾಗುವ ಶಿಷ್ಯ ವೇತನವನ್ನು ಇದೀಗ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಂಟಿಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ.
ರಾಜ್ಯದ ಎಲ್ಲ ರೈತ ಕುಟುಂಬದ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಕಾರ್ಯಕ್ರಮದಡಿ ಕೃಷಿ ಇಲಾಖೆಯಿಂದ 2500 ರೂ. ಗಳಿಂದ 11000 ರೂ. ಗಳವರೆಗೆ ವಾರ್ಷಿಕ ಶಿಷ್ಯವೇತನವನ್ನು ಅರ್ಹ ಮಕ್ಕಳ ಬ್ಯಾಂಕ್‍ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಪದ್ದತಿಯಲ್ಲಿ ಜಮೆ ಮಾಡಲಾಗುತ್ತಿದೆ.  ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ. ಭೂರಹಿತ ಕೃಷಿ ಕಾರ್ಮಿಕರ ಮಕ್ಕಳು ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನ ಪಡೆಯಲು  FID without land  ಹಾಗೂ ನರೇಗಾ ಗುರುತಿನ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.
08 ರಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿನಿಯರಿಗೆ  ಮಾತ್ರ ವಾರ್ಷಿಕ 2000 ರೂ. ವಾರ್ಷಿಕ ಶಿಷ್ಯ ವೇತನ ನೀಡಲಾಗುವುದು.  ಪಿಯುಸಿ, ಐಟಿಐ, ಡಿಪ್ಲೋಮಾ ಮುಂತಾದ ಪದವಿಗೂ ಮುನ್ನ ಪಡೆಯುವ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ರೂ. 2500 ಹಾಗೂ ವಿದ್ಯಾರ್ಥಿನಿಯರಿಗೆ ರೂ. 3000.  ಬಿಎ, ಬಿಎಸ್‍ಸಿ, ಬಿಕಾಂ ಮುಂತಾದ ಪದವಿ ವ್ಯಾಸಂಗ ಮಾಡುವ (ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್‍ಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ ರೂ. 5000, ವಿದ್ಯಾರ್ಥಿನಿಯರಿಗೆ ರೂ. 5500.  ಎಲ್.ಎಲ್.ಬಿ, ಪ್ಯಾರಾಮೆಡಿಕಲ್, ಬಿ.ಫಾರ್ಮ್, ನರ್ಸರಿ ಇತ್ಯಾದಿ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ರೂ. 7500, ವಿದ್ಯಾರ್ಥಿನಿಯರಿಗೆ ರೂ. 8000.  ಎಂ.ಬಿ.ಬಿ.ಎಸ್ / ಬಿ.ಇ / ಬಿ.ಟೆಕ್ ಮತ್ತುಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ರೂ. 10,000, ವಿದ್ಯಾರ್ಥಿನಿಯರಿಗೆ ರೂ. 11,000 ಗಳ ವಾರ್ಷಿಕ ಶಿಷ್ಯ ವೇತನ ನೀಡಲಾಗುವುದು.  ಈ ಯೋಜನೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ.
ಸಂಬಂಧಪಟ್ಟ ಪ್ರೌಢಶಿಕ್ಷಣ ವಿದ್ಯಾರ್ಥಿನಿಯರು, ಪದವಿ ಪೂರ್ವ, ಡಿಪ್ಲೋಮಾ, ಪದವಿ, ಇತ್ಯಾದಿ ವೃತ್ತಿಪರ ಕೋರ್ಸ್‍ಗಳು ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಸ್ಟೂಡೆಂಟ್ಸ್ ಸ್ಕಾಲರ್‍ಶಿಪ್ ಪೋರ್ಟಲ್ ಜಾಲತಾಣದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು   https://ssp.karnataka.gov.in/ssp2223/homeNew.aspx, ಹಾಗೂ ಮೆಟ್ರಿಕ್ ನಂತರದ ಎಲ್ಲ ವಿದ್ಯಾರ್ಥಿಗಳು  https://ssp.postmatric.karnataka.gov.in/homepage.aspx  ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಂಟಿಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours