ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ನಾರಿಶಕ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 16:
ಪ್ರಸಕ್ತ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಕೇಂದ್ರ ಸರ್ಕಾರದ “ನಾರಿಶಕ್ತಿ ಪುರಸ್ಕಾರ” ಪ್ರಶಸ್ತಿಗಾಗಿ www.awards.gov.in  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯದಿನ.
ನಾಮನಿರ್ದೇಶನಕ್ಕೆ ಅರ್ಹತೆಯ ಮಾನದಂಡಗಳು : ವ್ಯಕ್ತಿ ಪ್ರಶಸ್ತಿಗಾಗಿ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಕನಿಷ್ಠ 25 ವರ್ಷಗಳ ವಯೋಮಿತಿ ಹೊಂದಿರಬೇಕು. ನಾರಿಶಕ್ತಿ ಪುರಸ್ಕಾರವನ್ನು ಅಸಾಧಾರಣ ಸಂದರ್ಭಗಳಲ್ಲಿ ಮಹಿಳೆಯರ ಆರ್ಥಿಕ & ಸಾಮಾಜಿಕ ಸಬಲೀಕರಣದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ನೀಡಲಾಗುವುದು. ಸಾಮಾಜಿಕ & ಆರ್ಥಿಕ ಭದ್ರತೆಗೆ ಸ್ವಯಂ ನಿರ್ಧಾರ ತೆಗೆದುಕೊಳ್ಳಲು ಮಹಿಳೆಯರನ್ನು ಪ್ರೋತ್ಸಾಹಿಸಿದ ವ್ಯಕ್ತಿಗಳಿಗೆ, ಸಾಂಪ್ರದಾಯಿಕ & ಸಾಂಪ್ರದಾಯಿಕವಲ್ಲದ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿಯನ್ನು ಪ್ರೋತ್ಸಾಹಿಸಲು, ಗ್ರಾಮೀಣ ಮಹಿಳೆಯರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ, ಕಲೆ, ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಉತ್ತೇಜನ ನೀಡಿದ ಹಾಗೂ ಸುರಕ್ಷತೆ ಮತ್ತು ಭದ್ರತೆ, ಆರೋಗ್ಯ ಮತ್ತು ಕ್ಷೇಮ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಜೀವನ ಕೌಶಲಗಳು, ಮಹಿಳೆಯರ ಗೌರವ ಮತ್ತು ಘನತೆಯ ಉಳಿವಿಗಾಗಿ ತಮ್ಮನ್ನು ತೊಡಗಿಸಿಕೊಂಡ ವ್ಯಕ್ತಿಗಳ ಆಯ್ಕೆಗಾಗಿ ಈ ಪ್ರಶಸ್ತಿ ಘೋಷಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours