ವಿವಿಧ ವಿದ್ಯಾರ್ಥಿ ನಿಲಯಗಳಿಗೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್ ಗೆ ಅರ್ಜಿ ಆಹ್ವಾನ

 

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
*********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ06:
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 31 ರವರಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಅಗತ್ಯ ದಾಖಲೆಗಳ ಮೂಲಕ https://ssp.karnataka.gov.in/    ಗೆ ಅರ್ಜಿ  ಸಲ್ಲಿಸಬಹುದು ಎಂದು  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
========
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
**********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ06:
2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ, ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 20 ರವರಗೆ ವಿಸ್ತರಿಸಲಾಗಿದೆ.
1ನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳ ಮೂಲಕ https://ssp.karnataka.gov.in/ಗೆ ಅರ್ಜಿ  ಸಲ್ಲಿಸಬಹುದು ಎಂದು  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
========
ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ06:
2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 20 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
=======
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
***********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ06:
ಕರ್ನಾಟಕ ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಉದ್ಯಮಶೀಲತಾ (ಐ.ಎಸ್.ಬಿ) ಲಘು ಸರಕು ಸಾಕಾಣಿಕೆ ವಾಹನ ಮತ್ತು ದ್ವಿ ಚಕ್ರ ವಾಹನ ಯೋಜನೆಗಳಿಗೆ ಸಂಬಂಧಿಸಿದಂತೆ ಆನ್‍ಲೈನ್ (ಸೇವಾ ಸಿಂಧು ಪೋರ್ಟಲ್) ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 16 ರವರೆಗೆ ವಿಸ್ತರಿಸಲಾಗಿದೆ ಎಂದು ಕನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours