PHD ಪ್ರಾರಂಭಿಸಿದವರಿಗೆ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿ.22:
2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣವಧಿ ಪಿಎಚ್‍ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ 2023ರ ಜನವರಿ 30 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್‍ಡಿ ಪ್ರಾರಂಭಿಸಿರಬೇಕು) ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ) 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2024ರ ಜನವರಿ 10 ಕೊನೆಯ ದಿನ.
2023-24ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಮಾತ್ರ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ https://bcwd.karnataka.gov.in  ವೆಬ್‍ಸೈಟ್ ನಲ್ಲಿ ನೋಡಬಹುದು.

ಇದನ್ನೂ ಓದಿ:ಹೊರಗುತ್ತಿಗೆ ಉದ್ಯೋಗದಲ್ಲಿ ಭಾರೀ ಬದಲಾವಣೆ ತಂದ ಸರ್ಕಾರ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770004 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours