ಪ್ರತಿಷ್ಠಿತ ಶಾಲೆ ದಾಖಲಾತಿಗೆ ವಿದ್ಯಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.22: ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ(ಎಸ್.ಟಿ.) ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು, ಪರಿಶಿಷ್ಟ ವರ್ಗಗಳ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದೇ ಮೇ 25 ಕಡೆಯ ದಿನವಾಗಿದೆ.
5ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕಗಳಿಸಿರುವ, ವಾರ್ಷಿಕವಾಗಿ, ಕುಟುಂಬದ ವರಮಾನ ರೂ.2.00 ಲಕ್ಷ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಧೃಡೀಕೃತ ಅಂಕಪಟ್ಟಿಯನ್ನು ಅರ್ಜಿ ಜೊತೆಗೆ ಕಡ್ಡಾಯವಾಗಿ ಲಗತ್ತಿಸಬೇಕು. ಉಚಿತ ಅರ್ಹತಾ ಪರೀಕ್ಷಾ ಮೂಲಕ ವಿದ್ಯಾರ್ಥಿಗಳು ಆಯ್ಕೆ ಮಾಡಲಾಗುವುದು. ಆಯ್ಕೆಗೊಂಡ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಲ್ಲಿ ದಾಖಲು ಮಾಡಲಾಗುವುದು. ವಿದ್ಯಾರ್ಥಿಗಳ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು ಸರ್ಕಾರದ ನಿಯಮಗಳ ಅಡಿ ಪ್ರವೇಶ ಪಡೆದ ಶಾಲೆಯು ನಿಗಧಿ ಪಡಿಸಿದ ದರದಲ್ಲಿ ನೀಡಲಾಗುವುದು.
ಆಯಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಚಿತ್ರದುರ್ಗ ನಗರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅರ್ಜಿ ಪಡೆದು ಮೇ.25 ಸಂಜೆ 5 ಗಂಟೆ ಒಳಗೆ ಸಲ್ಲಿಸಬಹೇಕು. ಅಪೂರ್ಣಗೊಂಡ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗೇಂದ್ರನಾಯ್ಕ್ ತಿಳಿಸಿದ್ದಾರೆ.
[t4b-ticker]

You May Also Like

More From Author

+ There are no comments

Add yours