ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು ಸೇರಿ ಹಲವು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 22:
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ (ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 21 ಕೊನೆದಿನವಾಗಿದೆ.
ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳು, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ 01 ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.
ಅರ್ಜಿ ನಮೂನೆಗಳನ್ನು ಜಿಲ್ಲಾ ಕಛೇರಿಯಿಂದ ಪಡೆದು ಪೂರ್ಣ ವಿವರವನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ, ದ್ವಿ ಪ್ರತಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಛೇರಿಗೆ ಸಲ್ಲಿಸುವುದು, ತಡವಾಗಿ ಬಂದಂತಹ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇನತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಛೇರಿ ದೂರವಾಣಿ ಸಂಖ್ಯೆ  08194-235284ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours