ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಫೆ : 07 :
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ  ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಫೆ.17 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಹುದ್ದೆಗಳು ಖಾಲಿ ಇರುವ ಗ್ರಾಮ ಅಥವಾ ನಗರ ಪ್ರದೇಶ ವ್ಯಾಪ್ತಿಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಬಹುದು. 18 ರಿಂದ 45 ವರ್ಷದ ಒಳಗಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.9000/- ಗೌರವಧನ ನೀಡಲಾಗುವುದು.

ಇದನ್ನು ಓದಿ: ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್ ಮೈಲಾರದ ಕಾರ್ಣಿಕದ ಭವಿಷ್ಯವಾಣಿ ಅರ್ಥ ಏನು ನೋಡಿ!
ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ಪಡೆದು, ವಿವರಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು.
ಹುದ್ದೆಗಳ ವಿವರ : ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ, ಅನ್ನೇಹಾಳ್, ಕೂನಬೇವು, ಭರಮಸಾಗರ, ಬ್ಯಾಲಹಾಳ್, ಇಸ್ಸಾಮುದ್ರ, ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ವಾರ್ಡ್ ನಂ:25-35, ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ, ನಾಯಕನಹಟ್ಟಿಯ ಪಟ್ಟಣ ಪಂಚಾಯಿತಿ, ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ, ಆದಿವಾಲ, ರಂಗನಾಥಪುರ, ಹರಿಯಬ್ಬೆ, ಹಿರಿಯೂರು ನಗರಸಭೆಯ ವಾರ್ಡ್ ನಂ: 21-31, ಹೊಳಲ್ಕೆರೆ ತಾಲ್ಲೂಕಿನ ವಿಶ್ವನಾಥನಹಳ್ಳಿ, ಎನ್.ಜಿ.ಹಳ್ಳಿ, ಹೊಸದುರ್ಗ ತಾಲ್ಲೂಕಿನ ಕೆಲ್ಲೋಡು, ಕುರುಬರಹಳ್ಳಿ, ಹೊಸದುರ್ಗ ಪುರಸಭೆ, ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರದಲ್ಲಿ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇವೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235284 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours