ಬಿ.ಎಡ್. ಹಾಗೂ ಡಿ.ಎಡ್. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ನ.10: 2022-23ನೇ ಸಾಲಿನಲ್ಲಿ ಬಿ.ಎಡ್. ಹಾಗೂ ಡಿ.ಎಡ್ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಸೇವಾಸಂಧು ತಂತ್ರಾAಶದ ವೆಬ್ ಸೈಟ್  http://sevasindhu.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 10-12-2022 ಸಂಜೆ 5:30 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು. ಗರಿಷ್ಠ ವರಮಾನ ರೂ. 6 ಲಕ್ಷದ ಒಳಗಿರಬೇಕು. ಅಭ್ಯರ್ಥಿಗಳ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಪ್ರೋತ್ಸಾಹಧನಕ್ಕೆ ಆಯ್ಕೆ ಮಾಡಲಾಗುವುದು. ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತ ಪಡೆದ ತರಬೇತಿ ಸಂಸ್ಥೆಗಳಲ್ಲಿ ಓದುತ್ತಿರುವ ವಿಧ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.  ವಿದ್ಯಾರ್ಥಿಗಳ  ಹಿಂದಿನ ಸಾಲಿನಲ್ಲಿ ಶೇ.50% ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು. ಮೊದಲ ಹಾಗೂ ಎರಡನೇ ವರ್ಷದ ಪ್ರೋತ್ಸಾಹ ಧನಕ್ಕೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು. ನಿವಾಸಿ ಧೃಡೀಕರಣ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀಧಿ, ಆಧಾರ್ ಕಾರ್ಡು, ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಅಂಕಪಟ್ಟಿ, ವ್ಯಾಸಾಂಗ ಧೃಡೀಕರಣ ಪತ್ರ ಹಾಗೂ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಪಾಸ್ ಬುಕ್ ವಿವರಗಳೊಂದಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours