ಮುಖ್ಯಮಂತ್ರಿಯವರ ಜಿಲ್ಲಾ ಭೇಟಿ ಹಿನ್ನೆಲೆ : ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

 

 

 

 

ಚಾಮರಾಜನಗರ, ಡಿಸೆಂಬರ್ 12 ಮುಖ್ಯಮಂತ್ರಿಗಳ ಡಿಸೆಂಬರ್ 13ರ ಜಿಲ್ಲಾ ಭೇಟಿ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಹಾಗೂ ಹನೂರಿನ ಮಹದೇಶರ್ವ ಕ್ರೀಡಾಂಗಣ್ಕಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿದರು.

ಮೊದಲಿಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಚಿವರು ಕಾರ್ಯಕ್ರಮಕ್ಕಾಗಿ ಹಾಕಲಾಗಿರುವ ಬೃಹತ್ ವೇದಿಕೆ, ಶಾಮಿಯಾನ, ಇನ್ನಿತರ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಆಸನಗಳ ವ್ಯವಸ್ಥೆ, ಸಾರ್ವಜನಿಕರಿಗೆ ಕೈಗೊಂಡಿರುವ ಇನ್ನಿತರ ಸೌಕರ್ಯಗಳ ಬಗ್ಗೆ ವೀಕ್ಷಿಸಿದರು. ಕ್ರೀಡಾಂಗಣದಲ್ಲಿ ಕೈಗೊಂಡಿರುವ ಇತರೆ ಕೆಲಸಗಳನ್ನು ವೀಕ್ಷಿಸಿದ ಸಚಿವರು ಅಚ್ಚುಕಟ್ಟಾಗಿ ಎಲ್ಲಾ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಕೈಗೊಂಡಿರುವ ಭದ್ರತಾ ವ್ಯವಸ್ಥೆ, ವಾಹನಗಳ ನಿಲುಗಡೆ, ಸಂಚಾರ ವ್ಯವಸ್ಥೆ, ಫಲಾನುಭವಿಗಳ ಕರೆತರಲು ಕೈಗೊಂಡಿರುವ ಸಿದ್ದತೆಗಳನ್ನು ಪರಿಶೀಲಿಸಿದರು.

ಇದೇ ವೇಳೆ ಅಧಿಕಾರಿಗಳೊಂದಿಗೆ ಮಾತನಾಡಿದ ಸಚಿವರು ಮುಖ್ಯಮಂತ್ರಿಯವರ ಕಾರ್ಯಕ್ರಮ ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಅಧಿಕಾರಿಗಳಿಗೆ ನಿಯೋಜಿಸಲಾಗಿರುವ ಕೆಲಸಗಳನ್ನು ಜವಾಬ್ದಾರಿಯುತವಾಗಿ ಮಾಡಬೇಕು. ಎಲ್ಲಿಯೂ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

 

 

ಬಳಿಕ ಹನೂರು ಪಟ್ಟಣಕ್ಕೆ ತೆರಳಿ ಅಲ್ಲಿಯೂ ಸಹ ಮುಖ್ಯಮಂತ್ರಿಯವರ ಕಾರ್ಯಕ್ರಮದ ಸಿದ್ದತೆಗಳನ್ನು ವ್ಯಾಪಕವಾಗಿ ಪರಿಶೀಲಿಸಿದರು. ಶಾಮಿಯಾನ, ಆಸನಗಳ ವ್ಯವಸ್ಥೆ, ಸುಗಮ ಸಂಚಾರಕ್ಕೆ ಮಾಡಲಾಗಿರುವ ವ್ಯವಸ್ಥೆಗಳ ಬಗ್ಗೆ ಖುದ್ದು ವೀಕ್ಷಣೆ ಮಾಡಿದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಯಶಸ್ವಿಯಾಗಿ ಕಾರ್ಯಕ್ರಮ ನಡೆಯಲು ಎಲ್ಲಾ ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಬೇಕು. ವಹಿಸಲಾಗಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಫಲಾನುಭವಿಗಳನ್ನು ಕರೆತಂದು ಸೌಲಭ್ಯ ವಿತರಿಸುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.

ಪರಿಶೀಲನೆ ಸಮಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಧಿಕಾರಿಗಳು ಅಚ್ಚುಕಟ್ಟಾಗಿ ಎಲ್ಲಾ ಸಿದ್ದತೆ ಕೈಗೊಂಡಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಜನ ಬರಲಿದ್ದಾರೆ ಎಂದು ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.

ಶಾಸಕರಾದ ಎನ್. ಮಹೇಶ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಇತರೆ ಅಧಿಕಾರಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours