ಮುರುಘಾ ಶರಣರಿಗೆ ಜಾಮೀನು ಮಂಜೂರು

 

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರಿಗೆ( Shivamurthy Murugha Sharanaru ) ಹೈಕೋರ್ಟ್ ಜಾಮೀನು ನೀಡಿದೆ.

ಇದನ್ನು ಓದಿ: ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗೆ ಸರ್ಕಾರದಿಂದ 6.000ರೂ

ಬೆಂಗಳೂರು : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಆಲಿಸಿದ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ಚಿತ್ರದುರ್ಗಕ್ಕೆ ಹೋಗದಂತೆ ಷರತ್ತು ಹಾಕಲಾಗಿದೆ.

ಜಾಮೀನು ಕೋರಿ ಮುರುಘಾಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ. .

ಈ ಬಗ್ಗೆ ವಿಚಾರಣೆ ಮಾಡಿದ ನ್ಯಾಯಾಲಯ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆದರೆ, ಈವರೆಗೆ ಒಟ್ಟು 14 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ಮುರುಘಾ ಸ್ವಾಮೀಜಿ ಈಗಾಗಲೇ ಎರಡು ಬಾರಿ ಜಾಮೀನು ಮಂಜೂರಾತಿಗೆ ಹೈಕೋರ್ಟ್‌ಗೆ ಮನವಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ವಿಚಾರಣೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದ್ದ ನ್ಯಾಯಾಲಯ ಒಂದು ಪ್ರಕರಣದಲ್ಲಿ ಮಾತ್ರ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದ್ದು ಹೆಚ್ಚಿನ ವಿವರಗಳಿಗಾಗಿ ಸಂಪೂರ್ಣ ಮಾಹಿತಿ ಲಭ್ಯವಾಗಬೇಕಿದೆ.

[t4b-ticker]

You May Also Like

More From Author

+ There are no comments

Add yours