ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ
ವೇಣೂರು: ಸಾರ್ವಜನಿಕ ಶ್ರೀ ಶನೇಶ್ವರ ಪೂಜೋತ್ಸವ ಸಮುದಾಯ ಭವನ ಬತ್ತಾರು ಬಜಿರೆ ಇದರ ವತಿಯಿಂದ ಗ್ರಾಮ ಸುಭೀಕ್ಷೆಗಾಗಿ ೨೧ನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಯು ಡಿ. 27ರಂದು ಬಜಿರೆ ಬತ್ತಾರು ಸಮುದಾಯ ಭವನದಲ್ಲಿ ಬೆಳಿಗ್ಗೆ 9-00 ಗಂಟೆಯಿಂದ ನಡೆಯಲಿದೆ.
ಕೆದ್ದು ಶ್ರೀ ಲಕ್ಷ್ಮೀಕಾಂತ ಆಚಾರ್ಯರ ಪೌರೋಹಿತ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಬಜಿರೆ, ಜನಜಾಗೃತಿ ಗ್ರಾಮಸಮಿತಿ ಬಜಿರೆ, ವಿಘ್ನೇಶ್ವರ ನವಜೀವನ ಭಜನ ಮಂಡಳಿ ಬಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 9-00 ಗಂಟೆಯಿಂದ ಪೂಜೆ ಆರಂಭವಾಗಲಿದ್ದು, ಬಳಿಕ ಧಾರ್ಮಿಕಸಭೆ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಗಿರೀಶ್ ಕುಲಾಲ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ಎಸ್ಕೆಡಿಆರ್ಡಿಪಿ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ವೇಣೂರು ನಮನ ಕ್ಲಿನಿಕ್ನ ಡಾ. ಶಾಂತಿಪ್ರಸಾದ್ ಭಾಗವಹಿಸಲಿದ್ದಾರೆ.






