ಬೆಳ್ತಂಗಡಿ: ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಸಾಮಾಜಿಕ, ಧಾರ್ಮಿಕ ಹಾಗೂ ಕೃಷಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಅವರನ್ನು ಆಯ್ಕೆ ಮಾಡಲಾಗಿದೆ.
ಬಾಲಕೃಷ್ಣ ವಿ. ಶೆಟ್ಟಿ ಅವರು ಬೆಳ್ತಂಗಡಿ ತಾಲೂಕಿನಲ್ಲಿ ರಾಜಕೀಯವಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದು, ಶಿರ್ಲಾಲು ತಾಲೂಕು ಪಂಚಾಯತ್ ಸದಸ್ಯರಾಗಿಯೂ ಹಾಗೂ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಧಾರ್ಮಿಕ ಚಿಂತಕರಾಗಿರುವ ಅವರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡಿದ್ದು, ಬೆಳ್ತಂಗಡಿ ತಾಲೂಕು ವಿವೇಕ ಜಾಗೃತ ಬಳಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.





