ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಮೈರೋಳ್ತಡ್ಕ, ವಿವೇಕಾನಂದ ನಗರ – ಕುರಾಯ ದೇವಸ್ಥಾನ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿ ಪೂರ್ಣಗೊಂಡಿದೆ.
ಅನುದಾನ ಒದಗಿಸಿ ಮಳೆಗಾಲದ ಮುಂಚೆಯೇ ಕಾಮಗಾರಿ ಪೂರ್ಣಗೊಳಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಶಾಸಕರಾದ ಹರೀಶ್ ಪೂಂಜರವರಿಗೆ ಆ ಭಾಗದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.





