ಡಿಕೆಶಿ ವಿರುದ್ದ ಬೆಂಗಳೂರು ಸಾಮ್ರಟ್ ಸ್ಪರ್ಧೆ

 

 

 

 

ರಾಮನಗರ, ಏಪ್ರಿಲ್ 12 ಕರ್ನಾಟಕ ವಿಧಾನಸಭೆ ಚುನಾವಣೆಗೆ ಮಂಗಳವಾರ ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ  ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರ ಈ ಬಾರಿಯ ಚುನಾವಣೆಯಲ್ಲಿ ದೇಶದ ಗಮನ ಸೆಳೆಯಲಿದೆ.

ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಎದುರು ಕಂದಾಯ ಸಚಿವ ಆರ್. ಅಶೋಕ ಅಭ್ಯರ್ಥಿ ಎಂದು ಘೋಷಣೆ ಮಾಡಿದರು.

ಬೆಂಗಳೂರು ನಗರದ ಪದ್ಮನಾಭನಗರ ಕ್ಷೇತ್ರದ ಹಾಲಿ ಶಾಸಕ ಆರ್. ಅಶೋಕಗೆ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲು ಅವಕಾಶ ನೀಡಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಅವರು ಪದ್ಮನಾಭನಗರ ಮತ್ತು ಕನಕಪುರದಲ್ಲಿ ಕಣಕ್ಕಿಳಿಯಲಿದ್ದಾರೆ.

 

 

ಕನಕಪುರದಲ್ಲಿ ಆರ್. ಅಶೋಕ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಲೆಕ್ಕಾಚಾರದಂತೆ ಕೆಪಿಸಿಸಿ ಅಧ್ಯಕ್ಷರನ್ನು ಸೋಲಿಸಬೇಕು ಎಂದು ಬಿಜೆಪಿ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಆರ್. ಅಶೋಕರನ್ನು ಅದೇ ಸಮುದಾಯದ ಮತ್ತೊಬ್ಬ ಪ್ರಭಾವಿ ನಾಯಕ ಡಿ. ಕೆ. ಶಿವಕುಮಾರ್ ಎದುರು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

ಸತತವಾಗಿ 7 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಿ. ಕೆ. ಶಿವಕುಮಾರ್ ಕನಕಪುರವನ್ನು ಬಿಜೆಪಿಯ ಭದ್ರಕೋಟೆಯಾಗಿ ಮಾಡಿಕೊಂಡಿದ್ದಾರೆ. ಅಲ್ಲದೇ ರಾಮನಗರ ಜಿಲ್ಲೆಯಲ್ಲಿ ಡಿಕೆಶಿ ಸಹೋದರರ ಪ್ರಭಾವವೂ ಅಧಿಕವಾಗಿದೆ. ಅಲ್ಲದೇ ಈ ಬಾರಿಯ ಚುನಾವಣೆಯಲ್ಲಿ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಆದ್ದರಿಂದ ಅವರನ್ನು ಸೋಲಿಸಲು ಬಿಜೆಪಿ ತಂತ್ರ ರೂಪಿಸಿದೆ.

ಸಾತನೂರು ಕ್ಷೇತ್ರದಿಂದ ಡಿ. ಕೆ. ಶಿವಕುಮಾರ್ 2008ರಲ್ಲಿ ಕನಕಪುರಕ್ಕೆ ಬಂದರು. ಬಳಿಕ ನಡೆದ 3 ಚುನಾವಣೆಯಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸಿದ್ದಾರೆ. ಪ್ರತಿ ಚುನಾವಣೆಯಲ್ಲಿಯೂ ಅವರ ಗೆಲುವಿನ ಅಂತರ ಹೆಚ್ಚುತ್ತಲೇ ಇದೆ. 2008ರಲ್ಲಿ 7,179 ಮತಗಳ ಅಂತರದಿಂದ ಗೆದ್ದಿದ್ದ ಡಿ. ಕೆ. ಶಿವಕುಮಾರ್ 2018ರಲ್ಲಿ 79,909 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆ ಮೂಲಕ ತಮಗೆ ಎದುರಾಳಿ ಇಲ್ಲ ಎಂದು ಸಾಬೀತು ಮಾಡಿದ್ದಾರೆ.

ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಮುಖ್ಯಮಂತ್ರಿ ಆಗಬೇಕು ಎಂದು ಪಣತೊಟ್ಟು ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದರೆ ಅವರು ಕ್ಷೇತ್ರಕ್ಕೆ ಹೋಗದಿದ್ದರೂ ಅಲ್ಲಿ ಅವರ ಪ್ರಾಬಲ್ಯ ಮುರಿಯುವುದು ಸುಲಭದ ಮಾತಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೆ ಬಿಜೆಪಿ ಕನಕಪುರವನ್ನು ಸವಾಲು ಎಂದು ಸ್ವೀಕಾರ ಮಾಡಿ ಪ್ರಬಲ ಒಕ್ಕಲಿಗ ನಾಯಕ ಆರ್. ಅಶೋಕರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

[t4b-ticker]

You May Also Like

More From Author

+ There are no comments

Add yours