ಬಂಟ್ವಾಳ: ಗ್ರಾಹಕರ ಸೋಗಿನಲ್ಲಿ ಬುರ್ಖಾ ಧರಿಸಿ ಓರ್ವ ಹೆಂಗಸು, ಕೃಷ್ಣ ಕುಮಾರ್ ಸೋಮಯಾಜಿ ಎಂಬವರಿಗೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಏನಿದು ಘಟನೆ?
ದಿನಾಂಕ: 19.11.2025 ರಂದು ರಾತ್ರಿ ಸುಮಾರು 7.00 ಗಂಟೆ ವೇಳೆಗೆ, ಸೋಮಯಾಜಿ ಟೆಕ್ಸ್ ಟೈಲ್ಸ್ ಮಾಲಕ ಕೃಷ್ಣ ಕುಮಾರ್ ಸೋಮಯಾಜಿಯವರು ಅಂಗಡಿಯಲ್ಲಿದ್ದಾಗ, ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಬಂದ ಓರ್ವ ಹೆಂಗಸು, ಕೃಷ್ಣ ಕುಮಾರ್ ಸೋಮಯಾಜಿಯವರಿಗೆ ಕತ್ತಿಯಿಂದ ಹಲ್ಲೆ ನಡೆಸಿರುತ್ತಾರೆ.
ಈ ವೇಳೆ ಅಲ್ಲಿಂದ ಓಡಿದ ಕೃಷ್ಣ ಕುಮಾರ್ ಸೋಮಯಾಜಿಯವರನ್ನು ಆಟೋ ರಿಕ್ಷಾವೊಂದರಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆತಂದು ಅಲ್ಲಿ ಚಿಕಿತ್ಸೆ ಕೊಡಿಸಿರುತ್ತಾರೆ. ಪ್ರಸ್ತುತ ಗಾಯಾಳು ಮಂಗಳೂರಿನ ಎ.ಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದು, ಪ್ರಾಣಾಪಾಯದಿಂದ ಪಾರಾಗಿರುತ್ತಾರೆ.





