ವೇಣೂರು: ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಶ್ರೀ ಕ್ಷೇತ್ರ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ 2027ರಲ್ಲಿ ನಡೆಯಲಿರುವ ಅಷ್ಠಬಂಧ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆಯು ಜು. 5ರಂದು ಬೆಳಿಗ್ಗೆ10-00 ಗಂಟೆಯಿಂದ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.
ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಭಾಗವಹಿಸಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ತಿಳಿಸಿದ್ದಾರೆ.



