ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ, ಕಾರ್ಯದರ್ಶಿಯಾಗಿ ಕೆ.ಸಿ.ವೀರೇಂದ್ರ ಪಪ್ಪಿ ಆಯ್ಕೆ

 

ಚಿತ್ರದುರ್ಗ: ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ.

ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣ ಇತ್ಯರ್ಥವಾಗುವವರೆಗೆ ತಾತ್ಕಾಲಿಕ ಆಡಳಿತ ಸಮಿತಿ ರಚನೆ ಮಾಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆ ಸಮಿತಿಯನ್ನು ರಚನೆ ಮಾಡಲಾಗಿತ್ತು.

ಇದರಂತೆ ಸಮಿತಿಯು ನಿನ್ನೆ ಸಭೆ ನಡೆಸಿದ್ದು, ಸಭೆಯಲ್ಲಿ ಬಸವಪ್ರಭು ಸ್ವಾಮೀಜಿ ಅವರನ್ನು ಮಠದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಯಿತು. ಇದೇ ವೇಳೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಸಮಿತಿಯ ಕಾರ್ಯದರ್ಶಿಯನ್ನಾಗಿ ಮಾಡಲು ಕೂಡ ಸರ್ವಾನುಮತದಿಂದ ತೀರ್ಮಾನಿಸಲಾಯಿತು.ಇದಲ್ಲದೆ, ಆಡಳಿತ ಸಮಿತಿಯ ಸ್ವರೂಪ ಹಾಗೂ ಪದಾಧಿಕಾರಿಗಳ ಹೆಸರನ್ನು ಶೀಘ್ರವೇ ಹೈಕೋರ್ಟ್‌ಗೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರು ಮಠದ ಉಸ್ತುವಾರಿಯನ್ನು ಕಾನೂನು ಬದ್ಧವಾಗಿ ಬಸವಪ್ರಭು ಸ್ವಾಮೀಜಿ ಅವರಿಗೆ ನೀಡಿದ್ದರು. ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ್ದರಿಂದ ಸ್ವಾಮೀಜಿ ಧಾರ್ಮಿಕ ಕೈಂಕರ್ಯಗಳಿಗೆ ಸೀಮಿತವಾಗಿದ್ದರು.

[t4b-ticker]

You May Also Like

More From Author

+ There are no comments

Add yours