ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ‘ಭಾರತ ಪಂಚರತ್ನ ಪ್ರಶಸ್ತಿ’ಗೆ ಭಾಜನರಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ
ಸನ್ಮಾನ ಹಾಗೂ ಅಭಿನಂದನಾ ಸಮಾರಂಭ ನ.24 ರಂದು ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಸಭಾಭವನದಲ್ಲಿ ನಡೆಯಲಿದೆ.




ಜಮೀಯ್ಯತುಲ್ ಫಲಾಹ್, ಬೆಳ್ತಂಗಡಿ ಘಟಕದ ಅಧ್ಯಕ್ಷ ಖಾಲಿದ್ ಪೂಲಾಬೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಸನ್ಮಾನ ಸ್ವೀಕರಿಸುವರು.

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಅಧ್ಯಕ್ಷ ಕೆ ಹರೀಶ್ ಕುಮಾರ್, ಜಮೀಯ್ಯತುಲ್ ಫಲಾಹ್ ದ.ಕ.ಮತ್ತು ಉಡುಪಿ ಜಿಲ್ಲಾಧ್ಯಕ್ಷ ಅಶ್ಫಾಕ್ ಅಹಮದ್ ಕಾರ್ಕಳ, ಪ್ರಧಾನ ಕಾರ್ಯದರ್ಶಿ
ಮಹಮ್ಮದ್ ಹನೀಫ್, ಕೋಶಾಧಿಕಾರಿ ಅಬ್ದುಲ್ ನಾಸರ್ ಕೆ.ಕೆ., ಮಾಜಿ ಜಿಲ್ಲಾಧ್ಯಕ್ಷ ಹಾಜಿ ಶಾಹುಲ್ ಹಮೀದ್ ಅತಿಥಿಗಳಾಗಿ ಭಾಗವಹಿಸುವರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಳ್ತಂಗಡಿ ಬ್ಲಾಕ್ ಅಧ್ಯಕ್ಷ ಜಯರಾಮ್ ಜೈನ್ ಅಭಿನಂದನಾ ಭಾಷಣಗೈಯಲಿದ್ದಾರೆ ಎಂದು
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಉಮರ್ ಬೆಳ್ತಂಗಡಿ ಹಾಗೂ ಕೋಶಾಧಿಕಾರಿ ಎಸ್.ಎಂ.ಎಸ್. ಇಬ್ರಾಹಿಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
