ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಜು. 18ರಂದು ಪುತ್ತೂರು ಪತ್ರಿಕಾಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಬಿ.ಟಿ.ರಂಜನ್ ಪ್ರಶಸ್ತಿ: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಬಿ.ಟಿ. ರಂಜನ್ ಅವರು ಪತ್ರಿಕಾ ರಂಗಕ್ಕೆ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಅವರ ಸ್ಮರಣಾರ್ಥ ಉತ್ತಮ ಪತ್ರಿಕಾ ವರದಿಗೆ ಪುತ್ತೂರು ಉಪ ವಿಭಾಗದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ವಾರ್ಷಿಕ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಪ್ರಥಮ ವರ್ಷದ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯಲ್ಲಿ ಸುದ್ದಿ ಬಿಡುಗಡೆ ಮತ್ತು ಉದಯವಾಣಿ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ ಅರವಿಂದ ಹೆಬ್ಬಾರ್ ಅವರು ಕಳೆದ 7 ವರ್ಷಗಳಿಂದ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.



