ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿಂದೂ ಧಾರ್ಮಿಕ ಶ್ರದ್ಧಾಕೇಂದ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರವರನ್ನು ಜು.೩೦ರಂದು ಭೇಟಿಯಾಗಿ ಲಿಖಿತ ಮನವಿ ಸಲ್ಲಿಸಿದರು.
ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. ೧ ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. ೧ ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. ೫೦ ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. ೫೦ ಲಕ್ಷ ಒಟ್ಟು ೩ ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ. ಪರಮೇಶ್ವರವರನ್ನು ಜು.೩೦ ರಂದು ಭೇಟಿಯಾಗಿ ಮನವಿ ಸಲ್ಲಿಸಿದರು.




