ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿಗಳಾದ ಶ್ರೀ ಪ್ರಣವಾನಂದ ಸ್ವಾಮೀಜಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.

ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ ೪೧ ದಿನಗಳ ಕಾಲ ೭೦೦ ಕಿಲೋಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಠಕ್ಯಾರ್ ಉಪಸ್ಥಿತರಿದ್ದರು.






