ಬೆಳ್ತಂಗಡಿ: ತಾಲೂಕಿನ ಮದ್ದಡ್ಕದ ಮಸೀದಿ ಬಳಿ ಇಂದು ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ದುರ್ಘಟಣೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕೇಶವ ಗೌಡ ಎಂದು ಗುರುತಿಸಲಾಗಿದೆ.
ಸಹಸವಾರ ಕೂಡಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಮಿನಿ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




