ಬೆಳ್ತಂಗಡಿ: ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ನೂತನ ನಿರ್ದೇಶಕರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ತಾಲೂಕಿನ ಪ್ರಮುಖ ಮುಖಂಡರಾದ ಪಿ.ಟಿ. ಸೆಬಾಸ್ಟಿಯನ್ ಕಳೆಂಜ ಹಾಗೂ ಅಬ್ದುಲ್ ರಹಿಮಾನ್ ಪಡ್ಪು ಅವರಿಗೆ ಮಹತ್ವದ ಜವಾಬ್ದಾರಿ ಲಭಿಸಿದೆ.




ಕರ್ನಾಟಕ ಫಿಶರೀಸ್ ಡೆವಲಪ್ಮೆಂಟ್ ಬೋರ್ಡ್
ಕರ್ನಾಟಕ ಫಿಶರೀಸ್ ಡೆವಲಪ್ಮೆಂಟ್ ಬೋರ್ಡ್ನ ನಿರ್ದೇಶಕರಾಗಿ ಪಿ.ಟಿ. ಸೆಬಾಸ್ಟಿಯನ್ ಕಳೆಂಜ ಅವರು ನೇಮಕಗೊಂಡಿದ್ದಾರೆ. ಪ್ರಸ್ತುತ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿರುವ ಇವರು, ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ತಮ್ಮ ಅಪಾರ ಸಮಾಜ ಸೇವೆಯ ಮೂಲಕ ತಾಲೂಕಿನಲ್ಲಿ ಗುರುತಿಸಿಕೊಂಡಿದ್ದಾರೆ.


ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ
ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ ನಿಯಮಿತದ ನಿರ್ದೇಶಕರಾಗಿ ಅಬ್ದುಲ್ ರಹಿಮಾನ್ ಪಡ್ಪು ಅವರು ನೇಮಕವಾಗಿದ್ದಾರೆ. ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು, ಮಡಂತ್ಯಾರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾಗಿ ಮತ್ತು ಮಡಂತ್ಯಾರು ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ.
