ಬೆಳ್ತಂಗಡಿ: ತಮ್ಮ ಹಕ್ಕು, ಶಿಕ್ಷಣದ ಭವಿಷ್ಯ ಹಾಗೂ ನ್ಯಾಯಕ್ಕಾಗಿ ದೆಹಲಿಗೆ ತೆರಳಿ ಶಾಂತಿಯುತವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ನಡೆಸಿದ ಲಾಠಿಚಾರ್ಜ್ ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ. ಪ್ರಶ್ನೆ ಕೇಳುವ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವುದು ದೇಶದ ಯುವಶಕ್ತಿಯ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಆರೋಪಿಸಿದೆ.

ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಸಾಯೋಗದಲ್ಲಿ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ನಾಳೆ. ಜು. 23ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಟನೆ ಹಮ್ಮಿಕೊಂಡಿದೆ.



