ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ (ರಿ.) ಗುರುವಾಯನಕೆರೆ ಇದರ ನೂತನ ಅಧ್ಯಕ್ಷರಾಗಿ ನಿವೃತ್ತ ವಿಜಯ ಬ್ಯಾಂಕ್ ಪ್ರಬಂಧಕ ಸೋಮಯ್ಯ ಮೂಲ್ಯ ಹನೈನಡೆ ಆಯ್ಕೆಯಾಗಿದ್ದಾರೆ.
ಡಿ. ೭ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.
ಹರೀಶ್ ಕಾರಿಂಜ ಅವರು ಸುದೀರ್ಘ ವರ್ಷಗಳ ಸಂಘವನ್ನು ಮುನ್ನಡೆಸಿ ಸ್ವಜಾತಿ ಬಾಂಧವರ ಏಳಿಗೆಗಾಗಿ ಶ್ರಮಿಸುತ್ತಾ ಸ್ವಂತ ನಿವೇಶನ ಮತ್ತು ಕಟ್ಟಡಕ್ಕೆ ಅವಿರತ ಶ್ರಮ ವಹಿಸಿದ್ದರು. ಇದೀಗ ನೂತನ ಅಧ್ಯಕ್ಷರಿಗೆ ಕಾಯ್ದಿರಿಸಿದ ನಿವೇಶನದ ಕಟ್ಟಡದ ಬಹುದೊಡ್ಡ ಜವಾಬ್ದಾರಿ ಹೊಂದಿದ್ದು, ತಾಲೂಕಿನ ಸ್ವಜಾತಿ ಬಾಂಧವರು ನೂತನ ಸಮಿತಿಗೆ ಸಲಹೆ ಸಹಕಾರ ನೀಡುವಂತೆ ವಿನಂತಿಸಲಾಗಿದೆ.





