ಬೆಳ್ತಂಗಡಿ: ಭಾರತ ಕ್ರಿಕೆಟ್ ತಂಡದ ಆಟಗಾರ, ಕೊಡಗು ಮೂಲದ ರಾಬಿನ್ ಉತ್ತಪ್ಪ ಅವರ ತಂದೆ ವೇಣು ಉತ್ತಪ್ಪ ಅವರು ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಮತ್ತು ನವ ಗುಳಿಗ ಕ್ಷೇತ್ರ ಬರ್ಕಜೆ ಇಲ್ಲಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ಅವರು ವೇಣು ಉತ್ತಪ್ಪ ಅವರನ್ನು ಆದರದಿಂದ ಸ್ವಾಗತಿಸಿ, ಸತ್ಕರಿಸಿದರು. ಏಕಕಾಲದಲ್ಲಿ ನವ (9) ಗುಳಿಗ ದೈವಗಳ ಕೋಲವು ಇಲ್ಲಿ ನಡೆಯುತ್ತಿದ್ದು, ರಾಜ್ಯಮಟ್ಟದಲ್ಲಿ ಕ್ಷೇತ್ರ ಗುರುತಿಸಿಕೊಂಡಿದೆ.





