ಪಡಂಗಡಿ: ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಪ್ರಗತಿಯನ್ನು ಗಮನಿಸಿ ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಂದು ಉತ್ತಮ ಸಂಘ ಪ್ರಶಸ್ತಿ ನೀಡಿ ಗೌರವಿಸಿತು.


ಇಂದು ಜಿಲ್ಲಾ ಬ್ಯಾಂಕಿನ ಉತ್ಕೃಷ್ಠ ಸೌಧದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರಿ ದುರೀಣ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಪಡಂಗಡಿ ಸಂಘದ ಅಧ್ಯಕ್ಷರಾದ ಸುಂದರ ಪೂಜಾರಿ, ಕಾರ್ಯದರ್ಶಿ ಮೇಬಲ್ ಕ್ರಾಸ್ತ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಉಪಾಧ್ಯಕ್ಷರಾದ ಕೆ. ಸುಬ್ರಹ್ಮಣ್ಯ ಭಟ್, ನಿರ್ದೇಶಕರಾದ ಮೆಕ್ಸಿಂ ಸಿಕ್ವೇರಾ, ಬಾಜಿಲ್ ಫೆರ್ನಾಂಡಿಸ್ ಜೊತೆಗಿದ್ದರು.



