ಬಾಬರಿ ಧ್ವಂಸ ಪ್ರಕರಣದಲ್ಲಿ ತೀರ್ಪು ನೀಡಿದ ನ್ಯಾಯಾಧೀಶ ಯಾವಾಗ ನಿವೃತ್ತರಾಗಬೇಕಿತ್ತು ಗೊತ್ತೆ?

 

ಹೊಸದಿಲ್ಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿ ಇಂದು ತೀರ್ಪು ನೀಡಿದ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಸ್ ಕೆ ಯಾದವ್ ಅವರು 2019ರಲ್ಲಿ ನಿವೃತ್ತರಾಗಲಿದ್ದರು. ಆದರೆ ಬಾಬರಿ ಮಸೀದಿ ಪ್ರಕರಣದ ತೀರ್ಪು ನೀಡಲು ಹೆಚ್ಚಿನ ಸಮಯ ಅಗತ್ಯವಿದೆಯೆಂದು ಅವರು ಮಾಡಿದ ಮನವಿಯ ಮೇರೆಗೆ ಸುಪ್ರೀಂ ಕೋಟ್ ಅವರ ಅವಧಿಯನ್ನು ಇನ್ನೊಂದು ವರ್ಷಕ್ಕೆ ವಿಸ್ತರಿಸಿತ್ತು.

ಈ ಪ್ರಕರಣದ  ವಿಚಾರಣೆ ಮುಗಿಸಿ ಎರಡು ವರ್ಷಗಳಲ್ಲಿ ತೀರ್ಪು ನೀಡುವಂತೆ ಸುಪ್ರೀಂ ಕೋರ್ಟ್ ಯಾದವ್ ಅವರಿಗೆ ಇದಕ್ಕೂ ಮುಂಚೆ 2017ರಲ್ಲಿ ಸೂಚಿಸಿತ್ತು. ಈ ಹಿಂದೆ ಆಗಸ್ಟ್ 31ರೊಳಗೆ ತೀರ್ಪು ನೀಡುವಂತೆ ಸೂಚಿಸಲಾಗಿದ್ದರೂ  ನಂತರ ಕೋವಿಡ್ ಸಮಸ್ಯೆಯಿಂದಾಗಿ ಸೆಪ್ಟೆಂಬರ್ 30ಕ್ಕೆ ಕೊನೆಯ ದಿನಾಂಕ ವಿಸ್ತರಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ 351 ಸಾಕ್ಷಿಗಳು ಮತ್ತು 600 ದಾಖಲೆಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿತ್ತು

[t4b-ticker]

You May Also Like

More From Author

+ There are no comments

Add yours