ಭರ್ಜರಿ ಉದ್ಯೋಗ:3673 ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬೆಂಗಳೂರು: BMP recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

BBMP recruitment 2023: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಘನತ್ಯಾಜ್ಯ ನಿರ್ವಹಣಾ ವಿಭಾಗದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ನೇಮಕಾತಿ ಅಡಿಯಲ್ಲಿ ಒಟ್ಟು 3673 ಪೌರಕಾರ್ಮಿಕರನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸ್ಥಳೀಯ ವೃಂದದ ಹುದ್ದೆಗಳು (KK) ಕಲ್ಯಾಣ ಕರ್ನಾಟಕ- 430 ಹುದ್ದೆಗಳು
  • ಉಳಿಕೆ ಮೂಲ ವೃಂದದ ಹುದ್ದೆಗಳು (RPC)- 3243 ಹುದ್ದೆಗಳು

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಯಾವುದೇ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಿಲ್ಲ. ಇದಾಗ್ಯೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದಾದರೂ ರೀತಿಯಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕೆಂದು ತಿಳಿಸಲಾಗಿದೆ.

ವಯೋಮಿತಿ:

ಈ ಹುದ್ದೆಗಳಿಗೆ 55 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 17 ಸಾವಿರದಿಂದ 28,950 ರೂ.ವರೆಗೆ ವೇತನ ಸಿಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ನಿಗಮದ ಆಯಾ ವಾರ್ಡ್‌ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಘನತ್ಯಾಜ್ಯ ನಿರ್ವಹಣೆ) ಕಚೇರಿಗೆ ಕಳುಹಿಸಬೇಕಾಗುತ್ತದೆ.

KK ನೇಮಕಾತಿಯ ಅಧಿಕೃತ ಅಧಿಸೂಚನೆ: ಮಾಡಿ
RPC ನೇಮಕಾತಿಯ ಅಧಿಕೃತ ಅಧಿಸೂಚನೆ: ಮಾಡಿ
ಅರ್ಜಿ ನಮೂನೆ: ಮಾಡಿ
ಅಧಿಕೃತ ವೆಬ್‌ಸೈಟ್ : bbmp.gov.in

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 30, 2023

[t4b-ticker]

You May Also Like

More From Author

+ There are no comments

Add yours