ಮಂಗಳೂರಿನ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ NSUI ಮತ್ತು ABVP ಕಾರ್ಯಕರ್ತರ ನಡುವೆ ರಾಜಕೀಯ ಕಿಚ್ಚು ಭುಗಿಲೆದ್ದಿದೆ. NSUI ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ABVP ಪ್ರತಿಭಟನೆ ನಡೆಸಿ ಪ್ರಾಂಶುಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ಘಟನೆಯು ಕ್ಯಾಂಪಸ್ನಲ್ಲಿ ಮುಂಬರುವ ವಿದ್ಯಾರ್ಥಿ ಚುನಾವಣೆಗೂ ಮುನ್ನವೇ ತೀವ್ರ ಆತಂಕ ಸೃಷ್ಟಿಸಿದ್ದು, ಪೋಷಕರಲ್ಲಿ ಕಳವಳ ಮೂಡಿಸಿದೆ.