ದೆಹಲಿ, ಡಿ. 8: ಚುನಾವಣಾ ಅಕ್ರಮ ಆರೋಪ ಸಂಬಂಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಕೆ. ಶಂಕರ್ ಎನ್ನುವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿರುವ ನ್ಯಾ. ವಿಕ್ರಮನಾಥ್ ನೇತೃತ್ವದ ದ್ವಿ ಸದಸ್ಯ ಪೀಠ, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.





