ನ.20 ಕ್ಕೆ ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಎಸ್ಟಿ ಸಮಾವೇಶ:ಬಿ.ಶ್ರೀರಾಮುಲು

 

 

 

 

ಬಳ್ಳಾರಿ (ಅ.23): ಎಸ್ಸಿ, ಎಸ್ಟಿಸಮುದಾಯದ ಮೀಸಲಾತಿ ಹೆಚ್ಚಿಸುವ ನಿರ್ಧಾರವನ್ನು ಕೈಗೊಂಡಿರುವ ರಾಜ್ಯ ಬಿಜೆಪಿ ಸರ್ಕಾರ ಅದರ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದು, ನ.20ರಂದು ಎಸ್ಟಿ ಮೋರ್ಚಾದ ರಾಜ್ಯ ಮಟ್ಟದ ಸಮಾವೇಶವನ್ನು ಬಳ್ಳಾರಿಯಲ್ಲಿ ಅದ್ಧೂರಿಯಾಗಿ ನಡೆಸಲು ನಿರ್ಧರಿಸಿದೆ.

 

 

ಇಲ್ಲಿನ ಕೆಆರ್‌ಎಸ್‌ ಫಂಕ್ಷನ್‌ ಹಾಲ್‌ನಲ್ಲಿ ಶನಿವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಸಚಿವ ಬಿ.ಶ್ರೀರಾಮುಲು, ವಿಜಯನಗರ ಜಿಲ್ಲಾ ಸಚಿವ ಬಿ.ಆನಂದಸಿಂಗ್‌ ಸೇರಿದಂತೆ ಪಕ್ಷದ ಮುಖಂಡರು ಸಮಾವೇಶವನ್ನು ನಗರದಲ್ಲಿ ಅದ್ಧೂರಿಯಾಗಿ ನಡೆಸುವ ನಿರ್ಣಯ ಕೈಗೊಂಡರು.

ಈ ಹಿಂದಿನ ಸರ್ಕಾರಗಳು ಮೀಸಲಾತಿ ಹೆಚ್ಚಿಸುವ ಕೆಲಸ ಮಾಡಲಿಲ್ಲ. ಸಚಿವ ಬಿ.ಶ್ರೀರಾಮುಲು ಅವರ ನಿರಂತರ ಪರಿಶ್ರಮದಿಂದ ಇದು ಸಾಧ್ಯವಾಗಿದೆ. 2008ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಕಾರಣವಾಗಿದ್ದು ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಏನೂ ಕೆಲಸ ಮಾಡಲಿಲ್ಲ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಚಿವ ಆನಂದಸಿಂಗ್‌ ಹೇಳಿದರು. ಕಲ್ಯಾಣ ಕರ್ನಾಟಕದಲ್ಲಿ ಎಸ್ಟಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು ಹೀಗಾಗಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ಸಮಾವೇಶದಿಂದ ರಾಜಕೀಯವಾಗಿ ಪಕ್ಷಕ್ಕೆ ಲಾಭವಾಗಲಿದೆ. ಮುಖ್ಯಮಂತ್ರಿ ಸೇರಿದಂತೆ ರಾಷ್ಟ್ರೀಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.

[t4b-ticker]

You May Also Like

More From Author

+ There are no comments

Add yours