ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರ ಜನ್ಮ ದಿನ ಆಚರಣೆ

 

ಚಿತ್ರದುರ್ಗ : ಮಾಜಿ ಸಂಸದ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮದಿಂದ ಆಚರಿಸಿದರು.

ಮೈಸೂರು ಪೇಟ, ಶಾಲು, ಬೃಹಧಾಕಾರವಾದ ಹಾರಗಳನ್ನು ಹಾಕಿ ಕಾರ್ಯಕರ್ತರು ಬಿ.ಎನ್.ಚಂದ್ರಪ್ಪನವರಿಗೆ ಹುಟ್ಟುಹಬ್ಬದ ಶುಭ ಕೋರಿದರು. ಇನ್ನು ಕೆಲವರು ಹೂಗುಚ್ಚಗಳನ್ನು ನೀಡಿ ಶುಭ ಹಾರೈಸಿದರು.

ಜನ್ಮದಿನದ ಅಂಗವಾಗಿ ಮಹಿಳೆಯರಿಗೆ ಸೀರೆಗಳನ್ನು ವಿತರಿಸಲಾಯಿತು.
ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಶ್ರೀಮತಿ ರೇಣುಕಾಶಿವು, ಕೆ.ಪಿ.ಸಿ.ಸಿ. ಮಹಿಳಾ ಕಾಂಗ್ರೆಸ್ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಜಿಲ್ಲಾ ಕಾಂಗ್ರೆಸ್ ಕಿಸಾನ್‍ಸೆಲ್ ವಿಭಾಗದ ಅಧ್ಯಕ್ಷ ಎ.ನಾಗರಾಜ್, ಉಪಾಧ್ಯಕ್ಷ ಶಿವಲಿಂಗಪ್ಪ, ಎಸ್ಸಿ. ವಿಭಾಗದ ಜಿಲ್ಲಾಧ್ಯಕ್ಷ ಜಯಣ್ಣ, ಸೈಯದ್ ಖುದ್ದೂಸ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ಭಾಗ್ಯಮ್ಮ ಸೇರಿದಂತೆ ನೂರಾರು ಕಾರ್ಯಕರ್ತರು ಹುಟ್ಟುಹಬ್ಬ ಆಚರಣೆಯಲ್ಲಿದ್ದರು.

[t4b-ticker]

You May Also Like

More From Author

+ There are no comments

Add yours