ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಫೈ‌ನಲ್.

 

ಬೆಂಗಳೂರು: ಜೂನ್ 10 ರಂದು ನಡೆಯಲಿರುವ ಮುಂಬರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕ ಬಿಜೆಪಿ‌ ಪಕ್ಷದ ಅಭ್ಯರ್ಥಿಗಳನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಮತ್ತು ರಾಜಕಾರಣಿ ಮಾಜಿ ಶಾಸಕ‌ ಜಗ್ಗೇಶ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಭಾನುವಾರದಂದು ಅಂತಿಮಗೊಳಿಸಿದೆ.

ಕರ್ನಾಟಕದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ಉತ್ತರ ಪ್ರದೇಶದಿಂದ ಸೀತಾರಾಮನ್ ಅವರನ್ನು ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಘೋಷಣೆ ಹೊರಬಿದ್ದಿದೆ.ಕರ್ನಾಟಕದಲ್ಲಿನ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರನ್ನು ಭದ್ರಪಡಿಸಿಕೊಳ್ಳಲು ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಘೋಷಣೆಗೂ ಮುನ್ನ ಹೇಳಿದ್ದಾರೆ.

[t4b-ticker]

You May Also Like

More From Author

+ There are no comments

Add yours