ಬಿಜೆಪಿ ಮುಖಂಡ ನಟ ಕೆ.ಶಿವರಾಮ್ ಇನ್ನಿಲ್ಲ

 

ಬೆಂಗಳೂರು: ಬಿಜೆಪಿ ಮುಖಂಡ,ಚಿತ್ರನಟ  ಕೆ ಶಿವರಾಮ್ ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, 71 ವರ್ಷದ ಶಿವರಾಮ್‌ ಗುರುವಾರ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಇವರು ಸಿನಿಮಾ, ರಾಜಕೀಯ ಹಾಗೂ ಸರ್ಕಾರದ ಉನ್ನತ ಅಧಿಕಾರಿಯಾಗಿ ನಡೆದು ಬಂದ ಹಾದಿ ಮಾದರಿಯಾಗಿದೆ.

ಕೆ ಶಿವರಾಮ್‌ ನಡೆದು ಬಂದ ಹಾದಿ: ಶಿವರಾಮ್‌ ಹುಟ್ಟಿದ್ದು ಏಪ್ರಿಲ್ 6, 1953ರಲ್ಲಿ. ಮೂಲತಃ ರಾಮನಗರ ಜಿಲ್ಲೆ ಉರುಗಹಳ್ಳಿಯಲ್ಲಿ. ಶಿವರಾಮ್‌ ಮೂಲ ಹೆಸರು ಶಿವರಾಮು ಕೆಂಪಯ್ಯ. ಪತ್ನಿ ಹೆಸರು ವಾಣಿ ಶಿವರಾಮ್. ನಾಗತಿಹಳ್ಳಿ ಚಂದ್ರಶೇಖರ್ ನಿದೇಶನದ ‘ಬಾ ನಲ್ಲೆ ಮಧು ಚಂದ್ರಕೆ’ ಸಿನಿಮಾದಲ್ಲಿ ನಟಿಸಿ ಕೆ ಶಿವರಾಮು ಅವರು ಕರ್ನಾಟಕದ ಮನೆ ಮಾತಾಗಿದ್ದರು.

ಸರ್ಕಾರಿ ಅಧಿಕಾರಿಯಾಗಿ ಕೆ ಶಿವರಾಮ್‌: 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್‌ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರು. 2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್‌ ಸೇರಿ, ರಾಜಕೀಯ ಆರಂಭಿಸಿದ್ದರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ನಟನಾಗಿ ಕೆ ಶಿವರಾಮ್‌: 1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ , ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.

ರಾಜಕಾರಣಿಯಾಗಿ ಕೆ ಶಿವರಾಮ್‌: 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಮಹಸಭಾ ಅಧ್ಯಕ್ಷರೂ ಆಗಿದ್ದರು.

 

[t4b-ticker]

You May Also Like

More From Author

+ There are no comments

Add yours