ಬಿಜೆಪಿಯ ದಿನಕ್ಕೊಂದು ವಿಕೆಟ್ ಪತನ, ಗೂಳಿಹಟ್ಟಿ ರಾಜೀನಾಮೆ

 

ಶಿರಸಿ: ಹೊಸದುರ್ಗ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಗೆ ಟಿಕೆಟ್ ಕೈ ತಪ್ಪಿತ್ತು. ಅವರ ಬದಲು ಲಿಂಗಮೂರ್ತಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಬೇಸರಗೊಂಡಿದ್ದಂತ ಅವರು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.

ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಭೇಟಿಯಾದಂತ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು.

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಮಾನ್ಯ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಬಿಜೆಪಿ ವಿಫಲವಾಗಿದೆ. ಹೀಗಾಗಿ ಬೇಸರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.

ನಾನು ಹೊಸದುರ್ಗ ಕ್ಷೇತ್ರದಲ್ಲಿ ಈ ಭಾರಿಯ ಚುನಾವಣೆಯಲ್ಲಿ ಸ್ಪರ್ಧಿಸೋದಂತು ನಿಜ. ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ. ನನ್ನ ನಂಬಿರುವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಲಾರೆನು. ನಾಳೆ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

ಅಂದಹಾಗೇ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಎರಡು ಬಾರಿ ಚುನಾಯಿತರಾಗಿದ್ದರು. ಪಕ್ಷದಲ್ಲಿನ ಮುಸುಕಿನ ಗುದ್ದಾಟ, ಆಂತರೀಕ ಟಿಕೆಟ್ ಆಕಾಂಕ್ಷಿಗಳ ಕಾರಣದಿಂದ ಈ ಬಾರಿ ಅವರಿಗೆ ಟಿಕೆಟ್ ಕೈ ತಪ್ಪಿತ್ತು. ಬಿಜೆಪಿ ಪಕ್ಷದಿಂದ ಲಿಂಗಮೂರ್ತಿಗೆ ಟಿಕೆಟ್ ನೀಡಲಾಗಿತ್ತು.

[t4b-ticker]

You May Also Like

More From Author

+ There are no comments

Add yours