ಭೋವಿ ಗುರುಪೀಠಕ್ಕೆ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

 

ಭಾಜಪ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ರವರು ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿಗುರುಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ದರ್ಶನಾಶೀರ್ವಾದ ಪಡೆದರು.

ಅವರೊಂದಿಗೆ ಸದಾಶಿವ ಆಯೋಗ ವರದಿ ಕುರಿತು ಸುದೀರ್ಘವಾಗಿ ಚರ್ಚಿಸಲಾಗಿದೆ.

ಕಲ್ಲುಕುಟಿಗರ ಹಾಗೂ ಕಲ್ಲುಕ್ವಾರೆಗಳ ಸಮಸ್ಯೆಗಳ ಕುರಿತು,

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಭೋವಿ ಸಮಾಜದ ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ಹಂಚಿಕೆ ಕುರಿತು,

ಈಗಿನ ರಾಜಕೀಯ ಪ್ರಾತಿನಿಧ್ಯತೆ ತಪ್ಪಿರುವ ಕುರಿತು,

ಕುಲಪತಿಗಳ ನೇಮಕ,

ಸಿದ್ದರಾಮೇಶ್ವರ ಹಾಗೂ ಭೋವಿ ಸಮಾಜದ ಅಧ್ಯಯನ ಹಾಗೂ ಸಂಶೋಧನೆ ಕೇಂದ್ರ ಸ್ಥಾಪಿಸುವ ಕುರಿತು,

ನಾನಾ ರಾಜ್ಯಗಳಲ್ಲಿರುವ ಭೋವಿ ಸಮಾಜದ ಮೀಸಲಾತಿ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕುರಿತು

ಹಾಗೂ ಪ್ರಸ್ತುತ ವಿದ್ಯಾಮಾನಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಗಿದೆ.

ಈ ಸಂದರ್ಭದಲ್ಲಿ ಭಾಜಪ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಭಾಜಪ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲು, KSRTC ಅಧ್ಯಕ್ಷ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗ ಶಾಸಕ ಜಿ.ಎಸ್.ತಿಪ್ಪಾರೆಡ್ಡಿ, ಹಿರಿಯೂರು ಶಾಸಕಿ ಶ್ರೀಮತಿ ಪೂರ್ಣಿಮ ಶ್ರೀನಿವಾಸ, ವಿಧಾನ ಪರಿಷತ್ತಿನ ಸದಸ್ಯ ಕೆ.ಎಸ್.ನವೀನ, ನಾರಾಯಣಸ್ವಾಮಿ, ಅನಿತ್ ಅವರಿಗೆ ಗೌರವ ಸಮರ್ಪಣೆ ಮಾಡಲಾಯಿತು.

[t4b-ticker]

You May Also Like

More From Author

+ There are no comments

Add yours