ಬೆಳ್ತಂಗಡಿ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಬರೆದಿರುವ ವಕ್ತಿಯ ಮೇಲೆ ಕ್ರಮಕೈಗೊಳ್ಳುವಂತೆ ಬಿಜೆಪಿ ಎಸ್ಸಿ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಸುಬ್ಬಾಪುರ್ ಮಟ್ ಇವರಿಗೆ ದೂರನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸಿ.ಕೆ. ಚಂದ್ರಕಲಾ, ಉಪಾಧ್ಯಕ್ಷ ರಾಘವ ಕಲ್ಮಂಜ, ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಈಶ್ವರ ಬೈರ, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿಮೆಚ್ಚಿನ, ಬೆಳ್ತಂಗಡಿ ಮಹಿಳಾ ಮೋರ್ಚದ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀವಾಸ್ ಗೌಡ , ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಶ್ರೀಮತಿ ಆಶಾ, ಶ್ರೀಮತಿ ಚಂಚಲಾಕ್ಷಿ, ಶ್ರೀಮತಿ ಮಂಜುಳ ಮೊದಲಾದವರು ಉಪಸ್ಥಿತರಿದ್ದರು.






