ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ, ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ಹಾಗೂ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ 14ರ ವಯೋಮಾನದ ಬಾಲಕಿಯ ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಸುರತ್ಕಲ್ ಹೋಲಿ ಫ್ಯಾಮಿಲಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ಮಿಶಾ ಆರ್. ಕುಲಾಲ್ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆಯನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿ ಗೌರವಿಸಿದೆ.


ನಿಶಾ ಸುರತ್ಕಲ್ ಕೃಷ್ಣಾಪುರದ 4ನೇ ಬ್ಲಾಕ್ ನಿವಾಸಿ ರವಿ ಕುಲಾಲ್ ಮತ್ತು ಶ್ರೀಮತಿ ಚಂದ್ರಾವತಿ ದಂಪತಿ ಪುತ್ರಿ.


