ವೇಣೂರು: ಇತಿಹಾಸ ಪ್ರಸಿದ್ಧ ಮರೋಡಿ ಗ್ರಾಮದ ಪೊಸರಡ್ಕ ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಬ್ರಹ್ಮಕುಂಭಾಭಿಷೇಕ ಸಂಭ್ರಮ ಇಂದು (ಮೇ 1) ಸಂಪನ್ನಗೊಳ್ಳಲಿದೆ.
ಎ. 28ರಿಂದ ಆರಂಭಗೊಂಡಿದ್ದ ಬ್ರಹ್ಮಕುಂಭಾಭಿಷೇಕ ಸಂಭ್ರಮ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ವಿಜೃಂಭನೆಯಿಂದ ಜರಗಿತು.
ಇಂದು ಸಂಜೆ ಸಂಜೆ5-30ರಿಂದ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ ಮೂಡುಬಿದಿರೆ ಪ್ರಸ್ತುತ ಪಡಿಸುವ ಸಿಂಧೂರ ಸಂಗ್ರಾಮ ಯಕ್ಷಗಾನ ನಡೆಯಲಿದೆ. ಸಂಜೆ 7-30ರಿಂದ ನಡೆಯಲಿರುವ ಕೊನೆಯ ದಿನದ ಧಾರ್ಮಿಕ ಸಭೆಯಲ್ಲಿ ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್ ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದ ಅನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ವೇ.ಮೂ. ಕೆ. ಅನಂತ ಅಸ್ರಣ್ಣರು ಕೇಳ, ಎಸ್ಕೆಡಿಆರ್ಡಿಪಿ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್., ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಉದ್ಯಮಿ ಮೋಹನ್ ಕುಮಾರ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 10 ಗಂಟೆಯಿಂದ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ ಜರಗಲಿದೆ.





