ನಾರಾವಿ: ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ರವೀಂದ್ರ ಪೂಜಾರಿ ಬಾಂದೊಟ್ಟು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿಯ , ಎನ್ ದಿವಾಕರ ಭಂಡಾರಿ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ ಈದು, ಕಲಶ ಸಮಿತಿ ಸಂಚಾಲಕರಾದ ಪ್ರಮೋದ್ ಕುಲಾಲ್ ಉಪಸ್ಥಿತರಿದ್ದರು.





