ಬೆಳ್ತಂಗಡಿ: ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಹಾಡಹಗಲೇ ನಡೆದ ಕಕ್ಯಪದವಿನ ಯುವತಿಯ ಹತ್ಯೆಯನ್ಬು ಶಾಸಕ ಹರೀಶ್ ಪೂಂಜ ತೀವ್ರವಾಗಿ ಖಂಡಿಸಿದ್ದಾರೆ.
ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಇಂತಹ ಪ್ರಕರಣದಲ್ಲಿ ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಅರೋಪಿಯ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಯುವತಿಯ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ. ಕುಟುಂಬದ ದುಖಃದೊಂದಿಗೆ ನಾನು ಇದ್ದೇನೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.




