ಜಿಲ್ಲೆಯ ಅಭಿವೃದ್ಧಿಗೆ ಬಲ ನೀಡಿದ ಬಜೆಟ್: ಟಿ.ರಘುಮೂರ್ತಿ

 

ಚಿತ್ರದುರ್ಗ: ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಯ ಬಜೆಟ್ ಆಗಿದೆ.

ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ , ಶಿಕ್ಷಣ, ಆರೋಗ್ಯ,ಕೃಷಿ, ಆಧುನಿಕ ಉದ್ಯಮ ಸೇರಿ ಎಲ್ಲಾ ಕ್ಷೇತ್ರಗಳಿಗೆ ನ್ಯಾಯ ಒದಗಿಸುವ ಮೂಲಕ‌ ಪರಿಪೂರ್ಣವಾದ ಜನಪ್ರಿಯ ಬಜೆಟ್ ನೀಡಿದ್ದಾರೆ ಎಂದು ಚಳ್ಳಕೆರೆ ಶಾಸಕ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಅವರು ತಿಳಿಸಿದ್ದಾರೆ.

ನಮ್ಮ ಜಿಲ್ಲೆಯ ಜನರ ಕನಸಾಗಿರುವ ಮೆಡಿಕಲ್‌ ಕಾಲೇಜು ಕಟ್ಟಡ, ಹಾಸ್ಟೆಲ್, ಸಿಬ್ಬಂದಿ ವಸತಿ ಗೃಹ, ಮೂಲಸೌಕರ್ಯ ಒದಗಿಸಲು ಬಜೆಟ್ ನಲ್ಲಿ ಪ್ರಸ್ತಾಪ ಮಾಡಿರುವುದು ಸಂತಸ ತಂದಿದೆ.
ಜಿಲ್ಲೆಯಲ್ಲಿ ಈಗಾಗಲೇ ಚಳ್ಳಕೆರೆ, ಚಿತ್ರದುರ್ಗದಲ್ಲಿ ಜಿಟಿಟಿಸಿ ತರಬೇತಿ ಕೇಂದ್ರ ಇದ್ದು ಜಿಲ್ಲೆಗೆ ಮತ್ತೊಂದು ಜಿಟಿಟಿಸಿ ಕಾಲೇಜು ನೀಡಿದ್ದಾರೆ. ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ತಾಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆ ಕೈಗೊಳ್ಳಲು 6 ಕೋಟಿ ಹಣ ನೀಡಿದ್ದು ಎಲ್ಲಾವನ್ನು ನೀಡಿದ ಮುಖ್ಯಮಂತ್ರಿಗಳು ಮತ್ತು ಸರ್ಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಮರ್ಪಿಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನ ಚಾಚೂ ತಪ್ಪದೆ ಅನುಷ್ಠಾನಗೊಳಿಸಿ ಇಡೀ ದೇಶವನ್ನು ಕರ್ನಾಟಕದ ಕಡೆ ತಿರುಗಿ ನೋಡುವಂತೆ ಮಾಡಿದ್ದಾರೆ. ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಈ ಬಾರಿ ಬಜೆಟ್ ನಲ್ಲಿ ಗ್ಯಾರೆಂಟಿ ಯೋಜನೆಗಳ ಅನುದಾನ ಒದಿಗಿಸುವ ಜೊತೆ ಅಗತ್ಯ ಅಭಿವೃದ್ದಿಗೆ ಯಾವುದೇ ಕೊರತೆ ಮಾಡದೇ ಇರುವಂತಹ ಪ್ರಗತಿಶೀಲ ಬಜೆಟ್ ನಮ್ಮ ಮುಖ್ಯಮಂತ್ರಿಗಳೂ ಮಂಡಿಸಿದ್ದಾರೆ.

ಐದು ಗ್ಯಾರೆಂಟಿಗಳ ಜೊತೆಯಲ್ಲೆ ಹಿಂದೆಂದೂ ನೀಡದಷ್ಟು ಅನುದಾನವನ್ನ ಅಭಿವೃದ್ದಿ ಕಾರ್ಯಗಳಿಗೆ ನೀಡುವ ಮೂಲಕ ಈ ಆಯವ್ಯಯವು ನಮ್ಮ ರಾಜ್ಯದ ಮುಂದಿನ ನಡೆಯನ್ನು ನಿರೂಪಿಸುತ್ತದೆ. ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಮತ್ತು ಅಭಿವೃದ್ದಿ ಪರ್ವವನ್ನು ಒಳಗೊಂಡ ಕರ್ನಾಟಕದ ಅಭಿವೃದ್ದಿಗೆ ಪೂರಕವಾದ ಬಜೆಟ್ ಎಂದು ಬಣ್ಣಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours