ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಜೆಟ್ ನಲ್ಲಿ ನೀಡಿದ ಯೋಜನೆಗಳು

 

  • ಪ್ರವಾಸೋದ್ಯಮ ಬಜೆಟ್ 

* ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು.

*. ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.

*. ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು.

*. ಸಾಹಸ ಪ್ರವಾಸೋದ್ಯವನ್ನು ಉತ್ತೇಜಿಸಲು ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್‌ ಕಾರ್‌/ ರೋಪ್‌ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುವುದು.

*. ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು.

*. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್‌ ಸ್ಕ್ಯಾನಿಂಗ್‌ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದೆ.

ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ನಮ್ಮ ರಾಜ್ಯದ್ದಾಗಿದೆ. ಈ ಡಿಜಿಟಲ್‌ ಮಾಹಿತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.

*. ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು Archaeological Survey of India (ASI) ಗೆ ಶಿಫಾರಸ್ಸು ಮಾಡಲಾಗುವುದು.

*. ಕೆ.ಎಸ್.‌ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಿಸಲಾಗುವುದು ಹಾಗೂ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್‌ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.

*. ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲಾಗುವುದು.

* ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆಂಟರ್‌ಗಳನ್ನು ಜೆ.ಎಲ್.ಆರ್‌ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುವುದು.

* ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು.

* ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ.

[t4b-ticker]

You May Also Like

More From Author

+ There are no comments

Add yours