ಚುನಾವಣೆ ಪೂರ್ವದಲ್ಲಿ ಕುಂಬಾರ ಸಮುದಾಯಕ್ಕೆ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಮುಖಾಂತರ ಕುಂಬಾರ ಸಮುದಾಯಕ್ಕೆ ಸರ್ಕಾರ ಇದೀಗ 2026-27ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಇನ್ನಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾರ್ಕಳ ಕಾಂಗ್ರೆಸಿನ ಹಿಂದುಳಿದ ವರ್ಗಗಳ ಘಟಕದ ಮಾಜಿ ಅಧ್ಯಕ್ಷರಾದ ಕುಶ ಆರ್. ಮೂಲ್ಯ ಇನ್ನಾ ತಿಳಿಸಿದ್ದಾರೆ.




ಕುಂಬಾರ ಸಮುದಾಯದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವ ಮೂಲಕ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಯನ್ನು ಈಡೇರಿಸಿದೆ. ಇದೀಗ ನಿಗಮದ ಮೂಲಕ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿರುವುದು ಸಮುದಾಯದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದರು.

ಸ್ವಯಂ ಉದ್ಯೋಗ ಆರಂಭಿಸಲು ಹಾಗೂ ವಾಹನ ಖರೀದಿಸಲು ಗರಿಷ್ಠ ₹1.20 ಲಕ್ಷದವರೆಗೆ ಆರ್ಥಿಕ ನೆರವು, CET ಮತ್ತು NEET ಮೂಲಕ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಕಲ್ಪಿಸಿರುವುದು ಯುವಜನರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದರು.
ನಿಗಮ ಸ್ಥಾಪನೆಯೊಂದಿಗೆ ನಿಲ್ಲದೆ, ಅದರ ಮೂಲಕ ಸಮುದಾಯದ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮ ನಿಜಕ್ಕೂ ಅಭಿನಂದನೀಯ. ಇದು ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಕಾರ್ಯರೂಪಕ್ಕೆ ತರುವ ಕಾಂಗ್ರೆಸ್ ಸರ್ಕಾರದ ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.
ಆದ್ದರಿಂದ ಕುಂಬಾರ ಸಮುದಾಯದ ಅರ್ಹ ಫಲಾನುಭವಿಗಳು 2026-27ನೇ ಸಾಲಿನ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಸಮುದಾಯದ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಪ್ರತ್ಯೇಕ ನಿಗಮ ಸ್ಥಾಪಿಸಿ, ಇದೀಗ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂರಾಜ್ಯ ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ. ಶ್ರೀನಿವಾಸ್ ವೇಲುಕ್ಕೆ ಕುಂಬಾರ ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕುಶ ಆರ್. ಮೂಲ್ಯ ಇನ್ನಾ ತಿಳಿಸಿದ್ದಾರೆ.
