ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ ವಕಾಲತ್ತು ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ಸದ್ಯ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಕೂಡ ಸಲ್ಲಿಕೆಯಾಗಿದೆ. ಆ ವರದಿಯಲ್ಲಿ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರೋದು ಬಹಿರಂಗವಾಗಿದ್ದರೂ ಆರೋಪಿಗಳ ವಿರುದ್ದ ಎಸ್ಐಟಿ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ವಾದಮಂಡನೆ ನಡೆಯಲಿದೆ. ಎಸ್ಐಟಿ ವರದಿ ಸಂಬಂಧ ಜ.3ರಂದು ಬೆಳ್ತಂಗಡಿ ಕೋರ್ಟ್ ಅದೇಶ ಮಾಡಲಿರುವ ಕಾರಣ ಈ ವಿಚಾರ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.






