ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ಇಂದು ಸಂಜೆ ಲೋಕಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕಮಾಂಡ್ ಅಂತಿಮಗೊಳಿಸಿದ ಪಟ್ಟಿಯಂತೆ ಪ್ರಮುಖ ನಾಯಕರು ಸಂಪುಟ ಸೇರಲಿದ್ದು, ಸಚಿವ ಸ್ಥಾನಕ್ಕಾಗಿ ನಡೆದ ಸುದೀರ್ಘ ಕಾಯುವಿಕೆಗೆ ತೆರೆಬಿದ್ದಿದೆ. ನೂತನ ಸಚಿವರ ಪಟ್ಟಿ ಇಲ್ಲಿದೆ.

ಬೆಂಗಳೂರು, ಆ. 3: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಂದೆಡೆ ಕಾವೇರಿ ನದಿ ನೀರು ಹಂಚಿಕೆ ಹಾಗೂ ಪ್ರವಾಹದ ತೀವ್ರ ಸಂಕಷ್ಟ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಮತ್ತೊಂದೆಡೆ, ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಹಾಗೂ ದೆಹಲಿ ಮಟ್ಟದ ಸರಣಿ ಸಭೆಗಳು ಕೂಡ ಸಮಾನಾಂತರವಾಗಿ ತೀವ್ರ ಕುತೂಹಲ ಕೆರಳಿಸಿದ್ದವು. ಇದೀಗ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಾವು ತಂಗಿದ್ದು, ಇಂದು ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ.
ಶಾಸಕರ ನಡುವೆ ಭಾರೀ ಪೈಪೋಟಿ
ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗುತ್ತಿರುವ ಸಂಭಾವ್ಯ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಖಾನ್, ಎಸ್.ಎಸ್. ಮಲ್ಲಿಕಾರ್ಜುನ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ 10ಕ್ಕೂ ಹೆಚ್ಚು ಪ್ರಮುಖ ನಾಯಕರ ಹೆಸರುಗಳು ತೀವ್ರ ಚರ್ಚೆಯಲ್ಲಿತ್ತು. ಇವರಲ್ಲಿ ಕೆಲವರು ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದು, ಮತ್ತೆ ಸಂಪುಟ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಜಿಲ್ಲಾವಾರು ಪ್ರಾತಿನಿಧ್ಯ, ಜಾತಿ ಸಮತೋಲನ ಹಾಗೂ ಭಿನ್ನಮತ ಶಮನಗೊಳಿಸುವ ವಿಚಾರದಲ್ಲಿ ಶಾಸಕರ ನಡುವೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿಯಿಂದ ಲೋಕಭವನಕ್ಕೆ ಮೌಖಿಕ ಮಾಹಿತಿ ನೀಡಲಾಗಿದೆಯಾದರೂ, ಇದುವರೆಗೆ ಲಿಖಿತವಾಗಿ ಯಾವುದೇ ಅಧಿಕೃತ ಸೂಚನೆ ನೀಡಿಲ್ಲ ಎನ್ನಲಾಗಿತ್ತು. ಆದರೀಗ ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿ ಹೊರಬಿದ್ದಿದೆ.
ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿ
1. ಶ್ರೀ ಪಿ. ಎಂ. ನರೇಂದ್ರಸ್ವಾಮಿ
2. ಶ್ರೀ ಶಿವರಾಜ್ ತಂಗಡಗಿ
3. ಶ್ರೀ ರುದ್ರಪ್ಪ ಲಮಾಣಿ
4. ಶ್ರೀ ಕೆ. ಎಸ್. ಬಸವಂತಪ್ಪ
5. ಶ್ರೀ ಬಿ. ನಾಗೇಂದ್ರ
6. ಶ್ರೀ ಟಿ. ರಘುಮೂರ್ತಿ
7. ಶ್ರೀ ಬಿ. ಝಡ್. ಜಮೀರ್ ಅಹ್ಮದ್ ಖಾನ್
8. ಶ್ರೀ ರಿಜ್ವಾನ್ ಅರ್ಷದ್
9. ಶ್ರೀ ಸಂತೋಷ್ ಲಾಡ್
10. ಶ್ರೀ ಮಧು ಬಂಗಾರಪ್ಪ
11. ಶ್ರೀ ಪುಟ್ಟರಂಗಶೆಟ್ಟಿ
12. ಡಾ. ಅಜಯ್ ಸಿಂಗ್
13. ಶ್ರೀ ಎನ್. ಚಲುವರಾಯಸ್ವಾಮಿ
14. ಶ್ರೀ ಕೆ. ಎಮ್. ಶಿವಲಿಂಗೇಗೌಡ
15. ಶ್ರೀ ಹೆಚ್. ಸಿ. ಬಾಲಕೃಷ್ಣ
16. ಶ್ರೀಮತಿ ಗಾಯತ್ರಿ ಶಾಂತೇಗೌಡ
17. ಶ್ರೀ ಬಸವರಾಜ ರಾಯರೆಡ್ಡಿ
18. ಶ್ರೀ ವಿಜಯಾನಂದ ಕಾಶಪ್ಪನವರ್
19. ಶ್ರೀ ಲಕ್ಷ್ಮಣ್ ಸವದಿ
20. ಶ್ರೀ ಎಸ್ ಎಸ್ ಮಲ್ಲಿಕಾರ್ಜುನ



