ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ,ಕೊನೆಯ ದಿನಾಂಕ‌ ಯಾವಗ?

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್ 30:
2022-23ನೇ ಸಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-3ಬಿರಲ್ಲಿ ಬರುವ ಲಿಂಗಾಯತ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ, ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. www.kvldcl.karnataka.gov.inನಲ್ಲಿ ಜುಲೈ 28ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕಾಯಕಕಿರಣ ಯೋಜನೆಯಡಿ ಸಾಲ, ಸಹಾಯಧನ ಸೌಲಭ್ಯ ಪಡೆಯಲು ವೃತ್ತಿ ಕಸುಬುದಾರರು ಹಾಗೂ ಕುಶಲಕರ್ಮಿಗಳಿಗೆ  ಆರ್ಥಿಕ ಚಟುವಟಿಕೆ ಕೈಗೊಳ್ಳಲು ರೂ.1 ಲಕ್ಷದವರೆಗೆ ನೆರವು ನೀಡಲಾಗುವುದು.
ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಗರಿಷ್ಠ 15 ಸದಸ್ಯರಿಗೆ 2,25,000 ಆರ್ಥಿಕ ನೆರವು ನೀಡಲಾಗುವುದು. ಅದರಲ್ಲಿ ರೂ. 1,12,500 ಸಹಾಯಧನ ನೀಡಲಾಗುವುದು.
ಅರ್ಹತೆಗಳು: ಲಿಂಗಾಯತ ಸಮುದಾಯಕ್ಕೆ ಸೇರಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000/- ಹಾಗೂ ಪಟ್ಟಣ ಪ್ರದೇಶದವರಿಗೆ 1,20,000/- ಒಳಗಿರಬೇಕು. 18 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಚಾಲ್ತಿಯಲ್ಲಿರುವ ಜಾತಿ, ಆದಾಯ ಪ್ರಮಾಣ ಪತ್ರ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours