ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಸದ್ಯ ಎಲ್ಲೆಡೆ ಹೈಅಲರ್ಟ್ ಘೋಷಿಸಲಾಗಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಭಯಾನಕ ಕಾರು ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್ ಘೋಷಿಸಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಡಿಜಿ&ಐಜಿಪಿ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲೂ ಕಟ್ಟೆಚ್ಚರ
ದೆಹಲಿಯಲ್ಲಿ ಕಾರು ಸ್ಫೋಟ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಏರ್ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ನಿಗಾವಹಿಸುವಂತೆ ಎಸ್ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.









